Ripponpete | ವಿದ್ಯುತ್ ತಗುಲಿ ಯುವಕ ಸಾವು
ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ ಬಿದ್ದಿತ್ತು ಹಾಗಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.
ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದನು.
ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್