ಬೈಕ್ ಅಪಘಾತ – ವ್ಯಕ್ತಿ ಗಂಭೀರ : ಮಣಿಪಾಲ್ ಗೆ ರವಾನೆ
ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿ ನಡೆದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.
ಪುರಪ್ಪೆಮನೆ ಸಮೀಪದ ನಂದಿಗೆ ಗ್ರಾಮದ ಮೃತ್ಯುಂಜಯ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಬಾಳೂರು ಗ್ರಾಪಂ ವ್ಯಾಪ್ತಿಯ ಪೂಜಾರದಿಂಬ ಬಳಿಯಲ್ಲಿ ಬಜಾಜ್ ಪ್ಲಾಟಿನಾ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು 108 ಆಂಬುಲೆನ್ಸ್ ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ.
ಗಾಯಾಳುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹೊಸನಗರದ ಆಸ್ಪತ್ರೆಗೆ ಕಳುಹಿಸಲಾಗಿತ್ತು ಆದರೆ ತಲೆಗೆ ಗಂಭೀರವಾಗಿ ಗಾಯಗೊಂಡಿರುವ ಹಿನ್ನಲೆಯಲ್ಲಿ ಗಾಯಾಳುವನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.