Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ
ರಿಪ್ಪನ್‌ಪೇಟೆ : ನೆವಟೂರು ಗ್ರಾಮದ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ.
ನೆವಟೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಾಗರಾಜ್ ಕುಟುಂಬದವರು ಸೋಮವಾರ ಸಂಜೆ ತಮ್ಮ ಸಂಬಂಧಿಕರೊಬ್ಬರ ಅನಾರೋಗ್ಯದ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ತೆರಳಿದ್ದರು.
ಇಂದು ಮಧ್ಯಾಹ್ನ ವಾಪಾಸು ಮನೆಗೆ ಬಂದಾಗ ಮನೆಯ ಬಾಗಿಲಿನ ಬೀಗ ಮುರಿದು ಕಂಡುಬಂದಿತ್ತು ತಕ್ಷಣ ಮನೆಯೊಳಗೆ ಹೋಗಿನೋಡಿದಾಗ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು 60 ಗ್ರಾಂ ಚಿನ್ನಾಭರಣ ಹಾಗೂ ಸುಮಾರು 70 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ.
ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕೆ ತೆರಳಿದ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ತಂಡ ಪರಿಶೀಲನೆ ನಡೆಸಿ ಸ್ಥಳಕ್ಕೆ ಶಿವಮೊಗ್ಗದ ಬೆರಳಚ್ಚು ತಜ್ಞರನ್ನು ಕರೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.