Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ
ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು.
ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗಳಾದ ಚನ್ನೇಶ್ ಹಾಗೂ ದೇವರಾಜ್ ಇದ್ದರು.