Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ನಡೆದಿದ್ದೇನು..!?

ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ.

ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ ವಾಸ ಮಾಡುತ್ತಿತ್ತು. ಈ ನಡುವೆ ಇಬ್ಬರ ನಡುವೆ ಪರಸ್ಪರ ಜಗಳವಾಗಿದೆ. ಯುವತಿ ತನ್ನನ್ನು ಸಾಗರದಲ್ಲಿರುವ ಆತನ ನಿವಾಸಕ್ಕೆ ಕರೆದೊಯ್ಯುವಂತೆ ಪತಿಯನ್ನು ಒತ್ತಾಯಿಸಿದ್ದಾಳೆ. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದೆ.
ಈ ಜಗಳದ ಬೆನ್ನಲ್ಲೆ ಯುವಕ ಯುವತಿಯನ್ನ ಆಕೆಯ ತಾಯಿಯ ಮನೆಗೆ ಹೋಗುವಂತೆ ಸೂಚಿಸಿದ್ದಾನೆ. ಮನೆಯಲ್ಲಿ ಎಲ್ಲರನ್ನ ಒಪ್ಪಿಸಿ ಮನೆ ತುಂಬಿಸಿಕೊಳ್ಳುವುದಾಗಿ ಹೇಳಿದ್ದನಂತೆ. ಆದರೆ ಹುಡುಗಿ ಆತನ ಮಾತು ನಂಬಿ ತನ್ನ ತಾಯಿ ಮನೆಗೆ ಹೋಗದೇ, ಇದೇ ವಿಚಾರವಾಗಿ ಸಾಗರಕ್ಕೆ ಬಂದು ಯುವತಿ ಗಲಾಟೆ ಮಾಡಿದ್ದಾಳೆ.

ಹೆದ್ದಾರಿಪುರದಲ್ಲಿಯೇ ನಡೆಯಿತು ಕೊಲೆ !..

ಇಬ್ಬರ ನಡುವಿನ ಕಲಹ ತಾರಕಕ್ಕೇರಿ ಯುವತಿ ಸಾಗರದಿಂದ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರಕ್ಕೆ ಬಂದು ನಿಂತು ಯುವಕನ ಜೊತೆಗೆ ಮಾತನಾಡಿದ್ದಾಳೆ. ಅಲ್ಲಿಯು ಇಬ್ಬರ ನಡುವೆ ಗಲಾಟೆಯಾಗಿದೆ, ಈ ವೇಳೆ ಯುವಕ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ, ಹಲ್ಲೆಯಿಂದ ಯುವತಿ ಸಾವನ್ನಪ್ಪಿದ್ದಾಳೆ, ನಂತರ ಮೃತದೇಹವನ್ನು ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಹೂತು ಹಾಕಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸರು ಶಿವಮೊಗ್ಗದ ಆನಂದಪುರ , ರಿಪ್ಪನ್‌ಪೇಟೆ ಪೊಲೀಸ್‌ ಸ್ಟೇಷನ್‌ ನ್ನು ಸಂಪರ್ಕಿಸಿದ್ದು ಹೆದ್ದಾರಿಪುರದಲ್ಲಿ ಮಹಜರ್‌ ನಡೆಸಿದ್ದಾರೆ.

ಇಂದು ತಹಶೀಲ್ದಾರ್‌ ಸಮ್ಮುಖದಲ್ಲಿ ಪೊಲೀಸರು ಯುವತಿಯ ಶವವನ್ನು ಮೇಲೆತ್ತಿ ವಿಚಾರಣೆ ಮುಂದುವರಿಸುವ ಸಾಧ್ಯತೆ ಇದೆ. ಈ ಸಂಬಂಧ ಬಿಎನ್‌ಎಸ್‌ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago