ರಿಪ್ಪನ್‌ಪೇಟೆ : ತೀವ್ರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಟ್ಟಣದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.
ರಶ್ಮಿ ಆರ್ ನಾಯಕ್(42) ಮೃತ ಪಟ್ಟ ದುರ್ಧೈವಿಯಾಗಿದ್ದಾರೆ.ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ.
ಪಟ್ಟಣದ ರಾಘವೇಂದ್ರ ನಾಯಕ್ ಎಂಬುವವರ ಪತ್ನಿ ರಶ್ಮಿ ಆರ್.ನಾಯಕ್ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತಿದ್ದು ಅವರನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕಳೆದ 20 ದಿನಗಳ ಹಿಂದೆ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯಲ್ಲಿ ಪತ್ತೆಯಾದ ಪ್ರಥಮ ಡೆಂಗ್ಯೂ ಪ್ರಕರಣ ಇದಾಗಿದ್ದು ಆ ನಂತರದಲ್ಲಿ ಎಚ್ಚೆತ್ತುಕೊಂಡ ಗ್ರಾಮಾಡಳಿತ ಹಾಗೂ ಆರೋಗ್ಯ ಇಲಾಖೆ ಲಾರ್ವ ಸಮೀಕ್ಷೆ ನಡೆಸಿ ಫಾಗಿಂಗ್ ಹಾಗೂ ಔಷದಿ ಸಿಂಪಡಿಸುವ ಮೂಲಕ ಡೆಂಗ್ಯೂವನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ನಡೆಸಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್