ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು

ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.


ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.

ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ ಅವರ ಕಾರು ನಿಲ್ಲಿಸಿ ವಿಷಸೇವಿಸಿದ್ದಾರೆ. ದಾವಣಗೆರೆ ಜಿಲ್ಲೆಯ  ಹೊನ್ನಾಳಿ ಆರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರಿನಲ್ಲಿ ಅವರು ಪತ್ತೆಯಾಗಿದ್ದಾರೆ.

ಮಾಜಿ ಸಚಿವ ಬಿಸಿ ಪಾಟೀಲ್ ರವರ ಮೊದಲನೇ ಪುತ್ರಿಯ ಪತಿ  ಪ್ರತಾಪ್ ಕುಮಾರ್ ವಿಷ ಸೇವಿಸಿ ಮೃತಪಟ್ಟಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಬಿಸಿ ಪಾಟೀಲ್‌  ಮಧ್ಯಾಹ್ನ 1.45ಕ್ಕೆ ಪ್ರತಾಪ್ ರವರ ಅಣ್ಣ ಫೋನ್ ಮಾಡಿದ್ರು, ಪ್ರತಾಪ್ ಕಾಣೆಯಾಗಿದ್ದಾರೆ ಅಂಥಾ ತಿಳಿಸಿದ್ರು. ಈ  ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೆ. ಆ ಬಳಿಕ ಅವರ ಲೊಕೆಶನ್ ಪತ್ತೆ ಮಾಡಲು ಪ್ರಯತ್ನಿಸಲಾಗಿತ್ತು.

ಸ್ವಲ್ಪ ಸಮಯದ ನಂತರ ಅವರ ಪೋನ್  ಆನ್ ಆಗಿದ್ದು ಗೊತ್ತಾಗಿ ಕರೆ ಮಾಡಿದ್ವಿ ಹೀಗೆ ಹೊನ್ನಾಳಿ ರಸ್ತೆಯಲ್ಲಿ ಇದ್ದೇನೆ ಎಂದಾಗ ಅವರ ಅಣ್ಣ ಸ್ಥಳಕ್ಕೆ ಹೋಗಿ ಹೊನ್ನಾಳಿಯ ಆಸ್ಪತ್ರೆಗೆ ಕರೆದೊಯ್ದರು.

ಜೋಳಕ್ಕೆ ಸಿಂಪಡಿಸುವ ಔಷಧ ಕುಡಿದಿದ್ದಾರೆ ಎಂದು ತಿಳಿದು ಬಂತು, ತಕ್ಷಣ ದಾವಣಗೆರೆಗೆ ಶಿಫ್ಟ್ ಮಾಡೋಕೆ ಹೇಳಿದ್ವಿ ಆದರೆ ಶಿವಮೊಗ್ಗ ಹತ್ರ ಅಂತಾ ಇಲ್ಲಿಗೆ ಶಿಫ್ಟ್ ಮಾಡಲಾಗಿದೆ. ಅವರಿಗೆ ಮಕ್ಕಳ ವಿಚಾರದಲ್ಲಿ ಕೊರಗಿತ್ತು ,ಅಲ್ಲದೆ ಮದ್ಯಪಾನಕ್ಕೆ ಅಡಿಕ್ಟ್ ಆಗಿದ್ದರು..ಆ ಕಾರಣಕ್ಕೆ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಅಲ್ಲಿ ಸರಿ ಹೋಗಿದ್ದರು ಎಂದು ತಿಳಿಸಿದ್ದರು.

ತಮ್ಮ  ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೆ ನೋಡಿಕೊಳ್ಳುತ್ತಿದ್ದರು,ಮಗಳ ಮದುವೆ ಆಗಿ 16 ವರ್ಷವಾಗಿತ್ತು, ಬೆಳಗ್ಗೆ ಜೊತೆಯಲ್ಲಿ ತಿಂಡಿ ಮಾಡಿದ್ದೆವು. ಊರಿಗೆ ಹೋಗಿ ಬರುತ್ತೀನಿ ಅಂದಿದ್ದರು ಎಂದು ಭಾವುಕರಾದರು.ನಾಳೆ ಚನ್ನಗಿರಿಯ ಕತ್ತಲಗೆರೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದರು.

ಇನ್ನೂ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಬಿವೈ ವಿಜಯೇಂದ್ರ, ಬಿವೈ ರಾಘವೇಂದ್ರ, ರೇಣುಕಾಚಾರ್ಯ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಮೆಗ್ಗಾನ್‌ ಆಸ್ಪತ್ರೆಯ ಶವಾಗಾರದ ಬಳಿ ಆಗಮಿಸಿ ಬಿ ಸಿ ಪಾಟೀಲ್ ರವರಿಗೆ ಸಾಂತ್ವಾನ ಹೇಳಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

7 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

9 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago