Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಆರು ಜನ ಮಹಿಳೆಯರ ಬಂಧನ

Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಐವರು ಮಹಿಳೆಯರ ಬಂಧನ

ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.


ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿದ್ದಂತ ಕಳ್ಳತನ ಪ್ರಕರಣವನ್ನು ದೊಡ್ಡಪೇಟೆ ಠಾಣೆಯ ಪೊಲೀಸರು ಸವಾಲಾಗಿ ಸ್ವೀಕರಿಸಿದ್ದರು. ಈ ಪ್ರಕರಣ ಸಂಬಂಧ ಭದ್ರಾವತಿಯ ಐವರು ಮಹಿಳೆಯರನ್ನು ಬಂಧಿಸಿದ್ದಾರೆ ಅಂತ ತಿಳಿಸಿದ್ದಾರೆ.

ಬಂಧಿತ ಐವರು ಆರೋಪಿಗಳನ್ನು ಭದ್ರಾವತಿಯ ಹೊಸಮನೆಯ ಹನುಮಂತನಗರ ಬಡಾವಣೆಯ ನಿವಾಸಿಗಳಾದಂತ ಶಾಂತಿ ಯಾನೆ ಕರ್ಕಿ(31), ಸಾವಿತ್ರಿ ಯಾನೆ ಬಾಬಾ(29), ಸುಶೀಲಮ್ಮ(66) ಹಾಗೂ ಭೋವಿ ಕಾಲೋನಿಯ ನಿವಾಸಿ ದುರ್ಗಾ ಯಾನೆ ಸಣ್ಣ ದುರ್ಗ(29) ಎಂಬುದಾಗಿ ಗುರುತಿಸಲಾಗಿದೆ ಎಂದಿದ್ದಾರೆ.

ಬಂಧಿತ ಐವರು ಆರೋಪಿಗಳಿಂದ 7 ಪ್ರಕರಣಕ್ಕೆ ಸಂಬಂಧಿಸಿದಂತೆ ರೂ.8,13,000 ಮೌಲ್ಯದ 122 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಕಳೆದ ಜೂನ್.29, 2024ರಂದು ಶಿವಮೊಗ್ಗದ ಜೆಸಿ ನಗರದ ಮಹಿಳೆಯೊಬ್ಬರು ದಾವಣಗೆರೆಗೆ ತೆರಳಲು ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಆಕೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದಂತ ಚಿನ್ನಾಭರಣಗಳನ್ನು ಇದೇ ಐವರು ಮಹಿಳೆಯರು ಅಪಹರಿಸಿ ಪರಾರಿಯಾಗಿದ್ದರು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿ, ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ.

ಶಿವಮೊಗ್ಗ ನಗರದ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್ ರವಿ ಪಾಟೀಲ್ ನೇತೃತ್ವದಲ್ಲಿ ಎಎಸ್‌ಐ ನಾಗರಾಜ್, ಫಾಲಾಕ್ಷ ನಾಯ್ಕ್, ಲಚ್ಚನಾಯ್ಕ್, ಸಿಪಿಸಿಗಳಾದ ಚಂದ್ರ ನಾಯ್ಕ್, ಗುರುನಾಯ್ಕ್, ನಿತಿನ್, ಪುನೀತ್ ರಾವ್, ಸಿಬ್ಬಂದಿಗಳಾದ ದೀಪಾ ಎಸ್ ಹುಬ್ಬಳ್ಳಿ, ಪೂಜಾ, ಸುಮಿತ್ರಬಾಯಿ, ಲಕ್ಷ್ಮೀರವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago