ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga

ಶಿವಮೊಗ್ಗ : ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇರಿದು ಪರಾರಿಯಾಗಲು ಮುಂದಾದ ರೌಡಿ ಶೀಟರ್‌ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ.

ರಝಾಕ್ ಬಂಧಿತ ಆರೋಪಿಯಾಗಿದ್ದು ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ರಜಾಕ್ ಮೇಲೆ ಕೊಲೆ ಯತ್ನ ಸೇರಿ ಐದಾರು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ಈತನ ಬಂಧನಕ್ಕೆ ತೆರಳಿತ್ತು. ಬಂಧಿಸಲು ಹೋದಾಗ ಈತ ಪೊಲೀಸ್‌ ಸಿಬ್ಬಂದಿ ಕಾಲಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದ. ಈ ಸಂದರ್ಭದಲ್ಲಿ ಸಿಬ್ಬಂದಿಯನ್ನು ಪಾರು ಮಾಡಲು ಹಾಗೂ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಲಕ್ಷ್ಮಿಪತಿ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದಿದ್ದಾರೆ.

ಗಾಯಗೊಂಡಿರುವ ಆರೋಪಿ ರಜಾಕ್ ಹಾಗೂ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *