ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli
ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ.
56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಇತರ ಪೊಲೀಸರು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ.
ಸೋಮವಾರ ಸಂಜೆ ವೇಳೆ ಕುಸಿಯುವ ಹಂತಕ್ಕೆ ತಲುಪಿದ್ದ ತಡೆಗೋಡೆಗಳು ಮಂಗಳವಾರ ಸಂಜೆಯಾಗುವಷ್ಟರಲ್ಲಿ ಕುಸಿದು ಬಿದ್ದಿದೆ. ಒಂದೇ ಮಳೆಗೆ 56 ಕೋಟಿ ರೂ ವೆಚ್ಚದ ಸೇತುವೆ ಹಾಗೂ ತಡೆಗೋಡೆಯ ಕಾಮಗಾರಿ ಈ ಪರಿಸ್ಥಿತಿಗೆ ಬಂದಿರುವುದು ಅವೈಜ್ಞಾನಿಕ ಕಾಮಗಾರಿ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.