ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ 
 ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ತಾಲೂಕಿನಾದ್ಯಂತ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಗಾಳಿ ಮಳೆಯಿಂದ ಗೋಳಿ ಮರವೊಂದು ಉರುಳಿ ಬಿದ್ದು ಪಕ್ಕದಲ್ಲಿ ಇದ್ದ ಕಾರು(car) ಜಖಂಗೊಂಡ ಘಟನೆ ನಡೆದಿದೆ.
 ಪಟ್ಟಣದ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಕಾಂಗ್ರೆಸ್ ಕಚೇರಿ ಪಕ್ಕದಲ್ಲಿ ಇರುವಂತಹ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಪಕ್ಕದಲ್ಲಿ ಇದ್ದಂತಹ ಭಾರಿ ಹಳೆಯ ಗೋಳಿ ಮರವೊಂದು ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. 
 ತಡರಾತ್ರಿ ಈ ಘಟನೆ ನಡೆದ ಕಾರಣ ಬೇರೆ ಯಾವುದೇ ರೀತಿ ಅವಘಡ ಸಂಭವಿಸಿಲ್ಲ.
  


