ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ ವಿಮಲ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ.

ತಹಶೀಲ್ದಾರ್ ಚಂದ್ರಶೇಖರ್ ನಾಯಕ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಾಗರ ತಾಲೂಕಿನ ಅರಹ ಗ್ರಾಮದ ವಿಎ ವಿಮಲಾರಿಂದ ಆರೋಪ ಕೇಳಿ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ವಿಮಲಾ (33) ಆತ್ಮಹತ್ಯೆಗೆ ಯತ್ನಿಸಿದವರು.

ಅಸ್ವಸ್ಥ ಗ್ರಾಮ ಲೆಕ್ಕಾಧಿಕಾರಿ ವಿಮಲಾಗೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.