w
Headlines
Home » ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಶಿವಮೊಗ್ಗ : ರಾಗಿಗುಡ್ಡ ಚಾನಲ್‌ನ ಬಳಿಯಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
 
ಆರೋಪಿಗಳಾದ ಸಂಕೇತ, 23 ವರ್ಷ, ಗೋಪಾಳ, ಶಿವಮೊಗ್ಗ ಟೌನ್, ಅಂಬರೀಶ, 26 ವರ್ಷ, ನ್ಯೂ ಮಂಡ್ಲಿ, ಶಿವಮೊಗ್ಗ ಟೌನ್ ಮತ್ತು ಧನುಷ್, 20 ವರ್ಷ, ಪುರಲೆ, ಶಿವಮೊಗ್ಗ ಟೌನ್ ರವರನ್ನು ದಸ್ತಗಿರಿ ಮಾಡಲಾಗಿದೆ.

ಆರೋಪಿತರಿಂದ ಅಂದಾಜು ಮೌಲ್ಯ 68,000/- ರೂಗಳ 1 ಕೆಜಿ 243 ಗ್ರಾಂ ತೂಕದ ಒಣ ಗಾಂಜಾ ಮತ್ತು 2,350 ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0193/2024 ಕಲಂ 20(b), (II)B, 8(c) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.


ಚಾನೆಲ್ ಬಳಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ,  ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಬಿ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ,

ಶಿವಮೊಗ್ಗ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸತ್ಯನಾರಾಯಣ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.