ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು | Accident
ಮಾರುತಿ ಓಮಿನಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕೊಡತಾಳು ಗ್ರಾಮದ ಜಗದೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಹಾರನಹಳ್ಳಿಯ ಬ್ಯಾಂಕ್ ಗೆ ಹೋಗಿ ಬರುವುದಾಗಿ ಬೈಕ್ ನಲ್ಲಿ ಹೊರಟಿದ್ದ ಜಗದೀಶ್, ಸವಳಂಗ ರಸ್ತೆಯಿಂದ ಹಾರನಹಳ್ಳಿ ಕಡೆಗೆ ಬರುತಿದ್ದ ಮಾರುತಿ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ,ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.