ಭಾರಿ ಮಳೆಗೆ ಕುಸಿದು ಬಿದ್ದ ಮನೆ
ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಮಳವಳ್ಳಿ ಗ್ರಾಮದ ಶೈಲಜಾ ಎಂಬುವವರ ಮನೆ ಭಾರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ.
ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ,ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯ ಮಳವಳ್ಳಿ ಚಂದ್ರಶೇಖರ್ ಅಧಿಕಾರಿಗಳು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.