ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ

Shivamogga | ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಹೊಣೆ  ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಶಿವಮೊಗ್ಗ ನಗರದ ವತಿಯಿಂದ ಶಿವಮೊಗ್ಗ ನಗರದಲ್ಲಿ ಮೂರು ಕಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು.

ಗೋಪಿ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಜನಜಾಗೃತಿಗೋಸ್ಕರ  “ಮಾನವ ಸರಪಳಿ” ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ,ದೌರ್ಜನಗೋಳಗಾದ ಹಿಂದುಗಳ ರಕ್ಷಣೆಗೆ ಆಗ್ರಹಿಸಲಾಯಿತು.

ಅದೇ ಶಾಸಕ ಚೆನ್ನಬಸಪ್ಪನವರ  ನೇತೃತ್ವದಲ್ಲಿ ಶಿವಪ್ಪ ನಾಯಕ ವೃತ್ತದಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು  ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಮಾನವ ಹಕ್ಕು ಆಯೋಗ ಮುಂದಾಗಲ್ವಾ? ಎಚ್ಚರ… ಎಚ್ಚರ.. ಇದು ಬಾಂಗ್ಲಾ ಹಿಂದೂ ದೇವಾಲಯಗಳಿಂದ ಹೊರಬರುತ್ತಿರುವ ದೇವಸ್ಥಾನದ ಗಂಟೆಯ ಶಬ್ದವಲ್ಲ. ಎಚ್ಚರಿಕೆ ಗಂಟೆ ಎಂದು ವಿವಿಧ ಪ್ಲಕಾರ್ಡ್ ಹಿಡಿದು ಪ್ರತಿಭಟಿಸಲಾಗಿದೆ.‌

ನಗರದ ಬಸ್ ನಿಲ್ದಾಣದ ಅಶೋಕ ವೃತ್ತದಲ್ಲಿಯೂ ಹಿಂದೂ ಸಂಘಟನೆ ಪ್ರತಿಭಟಿಸಲಾಯಿತು.‌ ಬಾಂಗ್ಲಾ ಹಿಂದೂಗಳೆ ಹೆದರದಿರಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನ ಸಾರಲಾಗಿದೆ.‌

ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆಯ ವಾಸುದೇವ್, ಬಿಜೆಪಿಯ ಗಿರೀಶ್ ಪಟೇಲ್, ರಾಜೂಗೌಡ, ಅಂಕೂಶ್, ಧೀನ್ ದಯಾಳು, ಕೋಟೆ ರಾಜು, ಮೊದಲಾದವರು ಭಾಗಿಯಾಗಿದ್ದರು.‌

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

3 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

23 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago