POSTMANNEWS

ನೈಜ ಸುದ್ದಿ ನೇರ ಬಿತ್ತರ..

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ!

ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ.

ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ.

ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಒಬ್ಬ ವ್ಯಕ್ತಿ ಹಾಗೂ ಪಿಕಪ್ ನಲ್ಲಿದ್ದ ಮತ್ತೊರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತಪಟ್ಟವರು ಅಗಸರಕೋಣೆಯ ಶರತ್ ಹಾಗೂ ಮತ್ತೊಬ್ಬರು ಕೇರಳದ ಮೂಲದವರು ಎಂದು ತಿಳಿದು ಬಂದಿದೆ. ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದಾನೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

About The Author

Leave a Reply

Your email address will not be published. Required fields are marked *