Headlines

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ

JPEG 20240809 132533 4930658814657015120.jpg

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ

ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು.

ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ ಎಂಬುವವರು ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡಾ ಬಾವಿಗೆ ಹಾರಿ ಮೃತಪಟ್ಟಿದ್ದಾರೆ.

ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ.

ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಪಿಎಸ್ಐ ರಮೇಶ್ ಸಿಬ್ಬಂದಿಗಳೊಂದಿಗೆ ಧಾವಿಸಿ ಪರಿಶೀಲನೆ ನಡೆಸುತಿದ್ದಾರೆ.

ಮೃತದೇಹಗಳನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದ್ದು ಮರಣೋತ್ತರ ಪರೀಕ್ಷೆಗೆ ನಗರ ಆಸ್ಪತ್ರೆಗೆ ಕರೆತರಲಾಗಿದೆ.

ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *