ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು
ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ.
ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ.
ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್ನಲ್ಲಿರುವ ಯುವಕನ ಮೇಲೆ ದಾಳಿ ಮಾಡಿತ್ತು. ಬಳಿಕ ಮಹಿಳೆಯ ಮೇಲೂ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿತ್ತು ಎಂದು ತಿಳಿದು ಬಂದಿದೆ.
ಬೆಕ್ಕು ಕಚ್ಚಿದ ಪರಿಣಾಮ ಗಂಗೀಬಾಯಿ ರೇಬಿಸ್ ಕಾಯಿಲೆಗೆ ತುತ್ತಾಗಿದ್ದಳು. ಬೆಕ್ಕು ಕಚ್ಚಿದ ಬಳಿಕ ಮಹಿಳೆ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು ಇಂಜೆಕ್ಷನ್ ಪಡೆದು ಆರೋಗ್ಯವಾಗಿದ್ದೇನೆ ಎಂದುಕೊಂಡ ಗಂಗೀಬಾಯಿ ಉಳಿದ ನಾಲ್ಕು ಇಂಜೆಕ್ಷನ್ ತೆಗೆದುಕೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.
ಮೊದಲ ಇಂಜೆಕ್ಷನ್ ಪಡೆದ ಬಳಿಕ ಗಂಗೀಬಾಯಿ ಆರೋಗ್ಯ ಚೇತರಿಸಿಕೊಂಡಿದ್ದು, ಹುಷಾರಾದ ಬಳಿಕ ಗದ್ದೆಗೆ ನಾಟಿ ಮಾಡಲು ಹೋಗಿದ್ದಾರೆ. ನೀರು ಹಾಗೂ ಕೆಸರಿಗೆ ಇಳಿದ ಕಾರಣ ಬೆಕ್ಕು ಕಚ್ಚಿದ ಗಾಯ ಇನ್ನಷ್ಟು ಉಲ್ಬಣಗೊಂಡಿದೆ. ಜೊತೆಗೆ ರೇಬಿಸ್ ಕಾಯಿಲೆಯ ಲಕ್ಷಣಗಳು ಕೂಡ ಹೆಚ್ಚಾಗಿದ್ದು, ತೀವ್ರ ಅನಾರೋಗ್ಯ ಕಾಡಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆ ಬಳಿಕ ಎಚ್ಚೆತ್ತುಕೊಂಡ ಜಿಲ್ಲಾ ಆರೋಗ್ಯ ಅಧಿಕಾರಿಗಳು ನಾಯಿ ಮಾತ್ರವಲ್ಲ ಬೆಕ್ಕು ಕಚ್ಚಿದರೂ ಸಹ ರೇಬಿಸ್ ರೋಗ ಬರುತ್ತದೆ ಎಂದು ತರಲಘಟ್ಟ ಜನರಿಗೆ ತಿಳಿ ಹೇಳಿದ್ದಾರೆ. ಅಲ್ಲದೇ ಒಂದು ವೇಳೆ ಮನೆಯ ಸಾಕು ಪ್ರಾಣಿಗಳು ಕಚ್ಚಿದರೆ ತಕ್ಷಣವೇ ಚಿಕಿತ್ಸೆ ಪಡೆಯುವಂತೆ ತಿಳಿಸಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…