Ripponpete | ಹೃದಯಾಘಾತದಿಂದ ಯುವಕ ಸಾವು
ರಿಪ್ಪನ್‌ಪೇಟೆ : ಹೃದಯಾಘಾತದಿಂದ ಮೂವತ್ತು ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಪಟ್ಟಣದ ಸಮೀಪದ ಕೋಟೆತಾರಿಗ ನಿವಾಸಿ ಶ್ಯಾಮ್ ಜಾರ್ಜ್ (30) ಮೃತಪಟ್ಟ ಯುವಕನಾಗಿದ್ದಾನೆ.
ರಿಪ್ಪನ್‌ಪೇಟೆ ಪಟ್ಟಣದ ಅಂಗಡಿಗಳಿಗೆ ಪಾರ್ಸೆಲ್ ಡೆಲಿವರಿ ಮಾಡುತಿದ್ದ ಶ್ಯಾಮ್ ಜಾರ್ಜ್ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಇರುವಾಗ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿದ್ದಾನೆ.ಕೂಡಲೇ ಆತನನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು.ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು.
ಮೂಲತಃ ಕೇರಳದವರಾದ ಜಾರ್ಜ್ ಎಂಬುವವರ ಪುತ್ರ ಶ್ಯಾಮ್ ಜಾರ್ಜ್ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಗೂಡ್ಸ್ ವಾಹನದಲ್ಲಿ ಅಂಗಡಿಗಳಿಗೆ ಪಾರ್ಸೆಲ್ ಡೆಲಿವರಿ ಮಾಡುವ ಮೂಲಕ ಎಲ್ಲರಿಗೂ ಚಿರಪರಿಚಿತನಾಗಿದ್ದನು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…