Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು
ರಿಪ್ಪನ್‌ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು.
ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ.
ಇಂದು ಮಧ್ಯರಾತ್ರಿ ರಿಪ್ಪನ್‌ಪೇಟೆಯ ಶಬರೀಶ ನಗರದಲ್ಲಿರುವ ನಿವಾಸಕ್ಕೆ ಮೃತದೇಹವನ್ನು ತರಲಾಗುತ್ತಿದೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಹಿಂದೂ ರುಧ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.