ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ
ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹೌದು ಆನ್ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕನೊಬ್ಬ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಟೌನ್ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡಿದ್ದಕ್ಕೆ ನೊಂದು ಪ್ರದೀಪ್ (27) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆನ್ಲೈನ್ ನಲ್ಲಿ ಹಣ ಹಾಕಿದರೆ ಡಬಲ್ ಆಗುತ್ತೆ ಎಂದು ನಂಬಿ ಸುಮಾರು ಕಡೆ ಸಾಲ ಮಾಡಿ ಪ್ರದೀಪ್ 91 ಸಾವಿರ ರೂಪಾಯಿಗಳನ್ನು ಹೂಡಿಕೆ ಮಾಡಿದ್ದ. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತಂತೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…