ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ
ದೂರು ಸಲ್ಲಿಸಲು ತೆರಳಿದ್ದ ತನ್ನ ತಾಯಿಗೆ ಪೊಲೀಸರು ಬೈದಿದ್ದಾರೆ ಎಂಬ ಕೋಪಕ್ಕೆ ತನ್ನ ಬೈಕ್ಗೆ ಯುವಕನೊಬ್ಬ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ವಿಧಾನಸೌಧದ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತ ಕೃತ್ಯವೆಸಗಿದ್ದಾನೆ. ಬೆಂಗಳೂರಿನ ವಿಧಾನಸೌಧ ಹಾಗು ಹೈಕೋರ್ಟ್ ನಡುವಿನ ರಸ್ತೆಯಲ್ಲಿ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಬೆಂಕಿ ಹಚ್ಚಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರೋ ಪೃಥ್ವಿರಾಜ್ ನಾನು ಕೆಲದಿನಗಳ ಹಿಂದೆ ಟ್ರಿಪ್ ಹೋಗಿದ್ದೆ, ಆಗ ಮಳೆಗೆ ನೆಂದು ನನ್ನ ಫೋನ್ ಸ್ವಿಚ್ ಆಫ್ ಆಗಿತ್ತು. ಆಗ ನನ್ನ ತಾಯಿ ನಾನು ಕಾಣ್ತಿಲ್ಲ ಎಂದು ಪೊಲೀಸ್ ಠಾಣೆಗೆ ದೂರು ಕೊಡಲು ಹೋಗಿದ್ರು, ಆದ್ರೆ ಪೊಲೀಸರು ಕಂಪ್ಲೆಂಟ್ ತೆಗೆದುಕೊಳ್ಳದೇ ನನ್ನ ತಾಯಿಗೆ ಬೈದು, ದರ್ಪ ತೋರಿದ್ದಾರೆ. ಬಳಿಕ ನಾನು ಮನೆಗೆ ಬಂದ ಮೇಲೆ ಈ ವಿಚಾರ ನನಗೆ ತಿಳಿಯಿತು. ಇದನ್ನು ಪೊಲೀಸ್ರ ಬಳಿ ಪ್ರಶ್ನೆ ಮಾಡಿದೆ. ಆಗ ನನ್ನನ್ನು ನನ್ನ ತಾಯಿಯ ಎದುರೇ ನಾಯಿಗೆ ಹೊಡೆದಂತೆ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾನೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್