ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಹೊನ್ನಾಳಿ ವಲಯ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಮೂವರ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದೆ.
ಚಿನ್ನಿಕಟ್ಟೆ ಗ್ರಾಮದ ಮೋಹನ್ ಬಂಧಿತ ಆರೋಪಿ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 12 ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಗಳಾದ ಚಿನ್ನಿಕಟ್ಟೆ ಗ್ರಾಮದ ಶಿವಕುಮಾರ, ದಿನೇಶ, ವಡವೇಲು ಬಂಧನಕ್ಕೆ ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹೊನ್ನಾಳಿ ವಲಯ ಅರಣಾಧಿಕಾರಿ ಕಿಶೋರ್‌ನಾಯ್ಕ ತಿಳಿಸಿದ್ದಾರೆ.
ಹೊನ್ನಾಳಿ ಪ್ರಾದೇಶಿಕ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಕುದುರೆಕೊಂಡ ಬಿದರಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ನಾಡ ಬಂದೂಕು ಹಿಡಿದು ಬೇಟೆಯಾಡಲು ಓಡಾಡುತ್ತಿರುವಾಗ, ಗಸ್ತಿನಲ್ಲಿದ್ದ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದರು.
ಬಂಧಿತನಿಂದ ಚುಕ್ಕೆ ಜಿಂಕೆ ಸುಲಿದ ಚರ್ಮ 1, ನಾಡ ಬಂದೂಕು 1, ಪಲ್ಸರ್ ಬೈಕ್ ವಶಕ್ಕೆ ಪಡೆಯಲಾಗಿದೆ.
ಡಿಸಿಎಫ್ ಜಿ.ಆರ್. ಶಶಿಧರ್, ಎಸಿಎಫ್ ಭಾಗ್ಯಲಕ್ಷ್ಮೀ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಒಗಳಾದ ಬರ್ಕತ್ ಅಲಿ, ಎಂ.ಬಿ. ಶಿವಯೋಗಿ, ಜಿ.ಜಿ. ಹಸೀನ್ ಭಾಷ ಗಸ್ತು ಅರಣ್ಯ ಪಾಲಕರಾದ ನಾಗಲಿಂಗಪ್ಪ, ಅಂಜಲಿ, ಪ್ರಭಾಕರ, ಆಶಾ, ಸಿಬ್ಬಂದಿ ಎಂ.ಪಿ. ಬಸವರಾಜಪ್ಪ, ಪ್ರವೀಣ್, ಸುನೀಲ್, ಪ್ರದೀಪ್, ರಮೇಶ, ಮೌನೇಶ ಇದ್ದರು.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…