ಆನೆ ತುಳಿತಕ್ಕೊಳಗಾಗಿ ಸಾವನ್ನಪ್ಪಿದ ರೈತನ ಕುಟುಂಬಕ್ಕೆ 15 ಲಕ್ಷದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿದ್ದ ರೈತ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರದ ಚೆಕ್ ನ್ನು ಶಾಸಕ ಬೇಳೂರು ಗೋಪಾಲಕೃಷ್ಣ ವಿತರಿಸಿದರು.
ಮೇ 05 ರಂದು ಬಸವಾಪುರ ಗ್ರಾಮದ ತಿಮ್ಮಪ್ಪ (58) ಮನೆ ಸಮೀಪದ ಕಾಡಿಗೆ ದರಗು ತರಲು ಹೋದಾಗ ಕಾಡಾನೆ ತುಳಿದು ಮೃತಪಟ್ಟಿದ್ದರು.
ಮೇ 05 ರಂದು ಕಾಡಾನೆ ತುಳಿದು ರೈತ ಮೃತಪಟ್ಟ ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಧಾವಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಸ್ಥಳದಲ್ಲಿಯೇ ವೈಯಕ್ತಿಕವಾಗಿ 1ಲಕ್ಷ ಪರಿಹಾರ ನೀಡಿ ಸರ್ಕಾರದಿಂದ ಪರಿಹಾರ ದೊರಕಿಸುವ ಭರವಸೆ ನೀಡಿದ್ದರು.ಈ ಹಿನ್ನಲೆಯಲ್ಲಿ ಇಂದು ಮೃತ ರೈತ ತಿಮ್ಮಪ್ಪ ರವರ ಮನೆಗೆ ತೆರಳಿ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದರು.
ನಂತರ ಮಾತನಾಡಿದ ಶಾಸಕ ಬೇಳೂರು ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿ ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದೆ ಆ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಸಹಕಾರದಿಂದ 15 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದ್ದೇನೆ ಎಂದರು.
ಈ ಸಂಧರ್ಭದಲ್ಲಿ DFO ಹನುಮಂತಪ್ಪ , ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ,ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ , ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಗೌಡ,ಮುಖಂಡರಾದ ಆಸೀಫ಼್ , ಮಧುಸೂಧನ್ ,ಡಾಕಪ್ಪ ಹಾಲುಗುಡ್ಡೆ, ಕಾಂಗ್ರೆಸ್ ಘಟಕ ಅಧ್ಯಕ್ಷ ಗಣಪತಿ, ಸಣ್ಣಕ್ಕಿ ಮಂಜು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.