ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ.

ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ, ಬಸವರನ್ನ ಮುಗಿಸುವ ಡೀಲ್‌ ನಡೆದಿರುವ ಬಗ್ಗೆ ಹೇಳಿದ್ದಾನೆ.ಇದನ್ನ ಕೇಳಿಸಿಕೊಂಡ ವ್ಯಕ್ತಿಯು ಪೊಲೀಸರಿಗೆ ದೂರು ನೀಡಿದ್ದಾರೆ. 

ಮುಬ್ಬು ಹೇಳಿದಂತೆ ಜೈಲಿನಿಂದಲೇ ಡಿಚ್ಚಿ ಮುಬಾರಕ್‌ ಬಸವನ ಹತ್ಯೆಗೆ ಸ್ಕೆಚ್‌ ಹಾಕಿ ಸೀಗೆಬಾಗಿ ನಿವಾಸಿ ಟಿಪ್ಪುಗೆ ಡೀಲ್‌ ಕೊಟ್ಟಿದ್ದಾನೆ. ಗಾಂದಿ ಸರ್ಕಲ್‌ನಲ್ಲಿ ಬಸವನನ್ನ ಹೊಡೆದು ಹಾಕಿ ಎಂದು ಟಿಪ್ಪು ಆಂಡ್‌ ಟೀಂಗೆ ಹೇಳಿದ್ದ ಎಂದು ಮುಬ್ಬು ತಿಳಿಸಿದ್ದಾಗಿ ದೂರುದಾರರು ಹೇಳಿದ ಪ್ರಕಾರ ಎಫ್‌ಐಆರ್‌ ದಾಖಲಾಗಿದೆ. 

ಇಷ್ಟೆ ಅಲ್ಲದೆ ಕಳೇದ 17 ತಾರೀಖು ರಂಗಪ್ಪ ಸರ್ಕಲ್‌ ಬಳಿ ಸಿಕ್ಕ ಟಿಪ್ಪು ಬಾರ್‌ವೊಂದರಲ್ಲಿ ಕುಳಿತು ಡಿಚ್ಚಿ ಮುಬಾರಕ್‌ ಡೀಲ್‌ ಕೊಟ್ಟಿದ್ದು, ಅದರಂತೆ ಚಾಕು ತಂದಿದ್ದೇನೆ ಎಂದು ಮುಬ್ಬುಗೆ ತೋರಿಸಿರುವ ಬಗ್ಗೆ ಎಫ್‌ಐಆರ್‌ ನಲ್ಲಿ ಉಲ್ಲೇಖಿಸಲಾಗಿದೆ. 

ಒಟ್ಟಾರೆ ಕೊಲೆಗೆ ಸ್ಕೆಚ್‌, ಅಕ್ರಮ ಕೂಟು, ಸಂಚು ರೂಪಿಸಿದ ಆರೋಪ ಸೇರಿದಂತೆ ಬಿಎನ್‌ಎಸ್‌ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಾಗಿದೆ.  

Leave a Reply

Your email address will not be published. Required fields are marked *