ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅವರು, ” ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ ರಾಜ್ಯಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನು ಇದೆ ಎಂಬುದು ಲ್ಯಾಂಡ್‌ ಬೀಟ್‌ ಆಯಪ್ ಮೂಲಕ ತಿಳಿದುಬಂದಿದೆ. ಕಳೆದ ಎಂಟು ತಿಂಗಳಿನಿಂದ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಅವರ ಸರ್ಕಲ್‌ ನಲ್ಲಿ ಇರುವ ಸರ್ಕಾರಿ ಜಮೀನು ಎಷ್ಟಿವೆ? ಎಂದು ಲ್ಯಾಂಡ್‌ ಬೀಟ್ ಆಯಪ್ ನಲ್ಲಿ ಅಪ್ಲೋಡ್‌ ಮಾಡಲು ಹೇಳಿದ್ದೆವು. ಅದು ಅಪ್ಲೋಡ್‌ ಆದ ಮೇಲೆ ಈ ಲೆಕ್ಕ ಸಿಕ್ಕಿವೆ. ಈಗ ನಮ್ಮ ಬಳಿ ಜಿಲ್ಲಾವಾರು, ತಾಲೂಕವಾರು ಹಾಗೂ ಗ್ರಾಮವಾರು ಸರ್ವೇ ನಂಬರ್- ಲೊಕೇಷನ್‌ ಮತ್ತು ವಿಸ್ತೀಣದ ಮಾಹಿತಿ ಲಭ್ಯವಾಗಿದೆ” ಎಂದರು

ಮೊದಲ ಹಂತದ ಕೆಲಸ ಮುಕ್ತಾಯವಾಗಿದ್ದು, ಎರಡನೇ ಹಂತದಲ್ಲಿ ಮಾರ್ಚ್‌ ತಿಂಗಳಿನಿಂದ 14 ಲಕ್ಷ ಸರ್ವೇ ನಂಬರ್‌ಗೆ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಖುದ್ದು ಬೀಟ್‌ ಮಾಡಿಸಿದ್ದೇವೆ. 13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆಯಪ್ ನಲ್ಲಿ ನಮೂದಿಸಿದ್ದಾರೆ. ಈಗಾಗಲೇ ಶೇ.90 ರಷ್ಟು ಜಾಗ ಸ್ಪಾಟ್‌ ವಿಸಿಟ್‌ ಆಗಿದೆ, ಹಲವೆಡೆ ಒತ್ತುವರಿ ಇರುವುದು ಗೊತ್ತಾಗಿದ್ದು ಸೆಪ್ಟೆಂಬರ್‌ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಒತ್ತುವರಿಯನ್ನೂ ತಹಶೀಲ್ದಾರ್‌ ಮೂಲಕ ತೆರವುಗೊಳಿಸಲಾಗುವುದು. ಮುಖ್ಯವಾಗಿ ಕೆರೆ-ಸ್ಮಶಾನ ಜಾಗವನ್ನು ಸರ್ವೇ ನಡೆಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

Leave a Reply

Your email address will not be published. Required fields are marked *