ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ

ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು.

ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲೆಯ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾದ 14 – 17 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಯೋಗಾಸನ ಮತ್ತು ಚೆಸ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ವಿದ್ಯಾಭ್ಯಾಸದೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಉತ್ತಮರಾಗಲು ಸಾಧ್ಯ ಹಾಗೂ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಮಕ್ಕಳ ಜ್ಞಾನ ಹೆಚ್ಚಾಗುವುದು ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂಧರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ, ದೈಹಿಕ ಶಿಕ್ಷಣ ಪರಿವೀಕ್ಷಕರು ಬಾಲಚಂದ್ರ, ಸರ್ಕಾರಿ ಪ್ರೌಢಶಾಲೆಯ ಉಪಪ್ರಾಚಾರ್ಯ ಕೆಸುವಿನಮನೆ ರತ್ನಾಕರ್, ಸಿ.ಆರ್.ಪಿ. ಮಂಜುನಾಥ, ಗ್ರಾಮ ಪಂಚಾಯತಿ ಸದಸ್ಯ ಗಣಪತಿ ಮಧುಸೂಧನ್, ರಾಘವೇಂದ್ರ ಚಂದ್ರುಬಾಬು, ಸಿ.ಆರ್.ಪಿ ಕರಿಬಸಪ್ಪ, ಹೊಸನಗರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಶಿವಮೂರ್ತಿ ಎಂ.ಎಸ್, ಹೊಸನಗರ ಎಪಿಎಂಸಿ ಮಾಜಿ ಉಪಾಧ್ಯಕ್ಷ ಹೆಚ್.ವಿ. ಈಶ್ವರಪ್ಪ ಗೌಡ ಇನ್ನಿತರರು ಹಾಜರಿದ್ದರು.

10 ಪ್ರೌಢಶಾಲೆಗಳು ಮತ್ತು ಸುಮಾರು 20ಕ್ಕೂ ಹಿರಿಯ ಪ್ರಾಥಮಿಕ ಶಾಲೆಗಳಿಂದ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

Chess and Yoga Competition held at Govt High School, Ripponpet

Leave a Reply

Your email address will not be published. Required fields are marked *