ಹೊಸನಗರ: ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಶುಕ್ರವಾರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ.
ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು ಅರಣ್ಯದಲ್ಲಿ ಎರಡು ಎಕರೆ ಹಾಗೂ ಹಿರೇಮೈತಿ ಗ್ರಾಮದ ಸ.ನಂ.ಒಂದರ ಹರಿದ್ರಾವತಿ ರಾಜ್ಯ ಅರಣ್ಯ ಪ್ರದೇಶದ ಎರಡು ಎಕರೆ ಅರಣ್ಯ ಭೂ ಪ್ರದೇಶದ ಒತ್ತುವರಿ ತೆರವುಗೊಳಿಸಿ ಸಸಿ ನೆಟ್ಟು ಸಿಬ್ಬಂದಿಗಳು ಹಸಿರೀಕರಣ ಮಾಡಿದ್ದಾರೆ.
ಅರಣ್ಯಾಧಿಕಾರಿ ರಾಘವೇಂದ್ರ ಒತ್ತುವರಿ ಸ್ಥಳದಲ್ಲಿರುವುದು..
ಒಟ್ಟಾರೆ ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಲಾಗಿದೆ.ರಾಜ್ಯ ಸರ್ಕಾರ ಅರಣ್ಯ ಭೂಮಿ ಅಕ್ರಮ ಒತ್ತುವರಿ ತೆರವುಗೊಳಿಸಲು ಸೂಚಿಸಿದ ಬೆನ್ನಲ್ಲೆ ತೆರವು ಕಾರ್ಯವನ್ನು ಇಲಾಖೆ ಚುರುಕಿಗೊಳಿಸಿದೆ.
ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹೊಸನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಮಾರ್ಗದರ್ಶನದಲ್ಲಿ ಒತ್ತುವರಿ ತೆರವು ಕಾರ್ಯ ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್