ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಭೇದಿಯಾಗಿ ಅಸ್ವಸ್ಥರಾದ ಘಟನೆ ನಡೆಸಿದೆ.
ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಮಾತನಾಡಿದ ಟಿ ಹೆಚ್ ಓ ಅನಿಕೇತನ್ ” ಮಾತ್ರೆಗಳನ್ನು ಊಟದ ಮೊದಲೇ ಸೇವನೆ ಹಾಗೂ ಗ್ಯಾಸ್ಟ್ರಿಕ್ ಇರುವವರಿಗೆ ಈ ಸಮಸ್ಯೆ ಕಾಡುವುದು ಸಹಜ. ವಿದ್ಯಾರ್ಥಿನಿಯರು ಹಾಗೂ ಪೋಷಕರು ಈ ಬಗ್ಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಅದೇನೇ ಇರಲಿ ವಿದ್ಯಾರ್ಥಿಗಳು ಕೂಡ ಮಾತ್ರೆ ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆ ವಹಿಸುವುದು ಹಾಗೂ ಕಾಲೇಜು ಆಡಳಿತ ಮಂಡಳಿ ಆಗಲಿ ಅಥವಾ ಹಾಸ್ಟೆಲ್ ನಲ್ಲೆ ಆಗಲಿ ಇದರ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಒಳ್ಳೆಯದು ಎಂಬ ಮಾತು ಕೇಳಿ ಬರುತ್ತಿದೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…