ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು

ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು.

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ  ನೋಟ್ ಬುಕ್ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆ ಕಾಲೇಜ್‌ಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗಾಗಿ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಶೈಕ್ಷಣಿಕ ಜೀವನದಲ್ಲಿ ಯಶಸ್ಸನ್ನು ಕಾಣಬೇಕಿದೆ ಎಂದರು.

ನೀಡ್‌ಬೇಸ್ ಸಂಸ್ಥೆಯವರು ತೀರ್ಥಹಳ್ಳಿ ತಾಲ್ಲೂಕು ಸೇರಿದಂತೆ ರಾಜ್ಯದ ಹಲವು ಕಡೆಯಲ್ಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡುತಿದ್ದಾರೆ ಮುಂದಿನ ದಿನಗಳಲ್ಲಿ ಅದನ್ನು ವಿಸ್ತರಿಸಿ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು  ನೀಡಲು ಮುಂದಾಗಲಿ ನಾನು ಕೂಡಾ ಇಂತಹ ಮಹತ್ಕಾರ್ಯಕ್ಕೆ ವೈಯಕ್ತಿಕ ಆರ್ಥಿಕ ನೆರವು ಕಲ್ಪಿಸುವುದಾಗಿ ತಿಳಿಸಿದರು.

ಈ ವರ್ಷದ ಎಸ್.ಎಸ್.ಎಲ್.ಸಿ.ಫಲಿತಾಂಶ ಉತ್ತಮ ಪ್ರಗತಿ ಹೊಂದಿದ್ದು ಬರುವ ಶೈಕ್ಷಣಿಕ ವರ್ಷದಲ್ಲಿ ಶೇ. 100 ರಷ್ಟು ಫಲಿತಾಂಶ ಗಳಿಸುವಂತೆ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವೃಂದದವರಿಗೆ ಕರೆ ನೀಡಿ, ಎಲ್ಲಿಯೂ ವ್ಯಾಸಂಗದಿಂದ ವಿದ್ಯಾರ್ಥಿಗಳು ಹಿಂದುಳಿಯದಂತೆ ಮಾಡುವ ಜವಾಬ್ದಾರಿ ಶಿಕ್ಷಕರದಾಗಬೇಕು ಎಂದರು.

ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಶಾಂತ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತ್ ಅಧ್ಯಕ್ಷೆ  ಧನಲಕ್ಷ್ಮಿ, ನೀಡ್ ಬೇಸ್ ಸಂಸ್ಥೆಯ ಆದರ್ಶ ಹುಂಚದಕಟ್ಟೆ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿಗೌಡ, ಹೋಬಳಿ ಘಟಕದ ಅಧ್ಯಕ್ಷ ಗಣಪತಿ ಗವಟೂರು, ಡಿ.ಈ.ಮಧುಸೂಧನ, ಎನ್.ಚಂದ್ರೇಶ್, ಆಸಿಫ್‌ಭಾಷಾ, ಪ್ರಕಾಶ ಪಾಲೇಕರ್, ರವೀಂದ್ರ ಕೆರೆಹಳ್ಳಿ, ಶ್ರೀಧರ, ದೈಹಿಕ ಶಿಕ್ಷಣ ಸಂಯೋಜಕ ಬಾಲಚಂದ್ರ, ಸಂಪನ್ಮೂಲ ವ್ಯಕ್ತಿ ರಂಗನಾಥ್, ರಾಘವೇಂದ್ರ ಇನ್ನಿತರರು ಹಾಜರಿದ್ದರು.

ಉಪ ಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ಸ್ವಾಗತಿಸಿದರು. ಶಿಕ್ಷಕ ಚಂದ್ರಪ್ಪ ನಿರೂಪಿಸಿದರು.

Leave a Reply

Your email address will not be published. Required fields are marked *