ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು
ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ
ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.
ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಶುಕ್ರವಾರ ಸಂಗೀತಾ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…