ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್
ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.
ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ.
ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಸದಾಶಿವ ಅವರು ಶನಿವಾರದಂದು (ಆ.31) ವಯೋನಿವೃತ್ತಿ ಹೊಂದಿದ ಪ್ರಯುಕ್ತ ಹೊಸನಗರ ಕಂದಾಯ ಇಲಾಖೆಯ ವತಿಯಿಂದ ಬೀಳ್ಕೊಡಲಾಯಿತು.
ಸದಾಶಿವ ರವರ ವಯೋನಿವೃತ್ತಿ ಪ್ರಯುಕ್ತ ತಾಲೂಕ್ ಕಛೇರಿಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ನಂತರದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸ್ವತಃ ತಾವೇ ಸರ್ಕಾರಿ ವಾಹನದಲ್ಲಿ ಸದಾಶಿವ ಅವರನ್ನು ಮನೆಗೆ ತಲುಪಿಸಿ ಅವರಿಗೆ ವಿಶೇಷವಾಗಿ ಬೀಳ್ಕೊಟ್ಟರು.
ಉನ್ನತ ಅಧಿಕಾರಿ ಎನ್ನುವ ಅಹಂ ಇಲ್ಲದೇ ತಹಶೀಲ್ದಾರ್ ರಶ್ಮಿ ಹಾಲೇಶ್ ತಮ್ಮ ಸಿಬ್ಬಂದಿಯನ್ನು ಬೀಳ್ಕೊಟ್ಟ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಯ್ತು…..
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…