ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ
ಹೊಸನಗರ: ಸಾಲಬಾಧೆಗೆ ತುತ್ತಾಗಿ ತಾಲೂಕಿನ ನಗರ ಹೋಬಳಿ ಮುಂಡಳ್ಳಿ ಸಮೀಪದ ನರ್ತಿಗೆ ಗ್ರಾಮದ ವಾಸಿ ರೈತ ಎನ್.ಟಿ. ತಿಮ್ಮಪ್ಪ(52) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.
ತನ್ನ ತೋಟದಲ್ಲಿ ಕೆಲಸಕ್ಕೆಂದು ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವಾಂತಿ ಮಾಡಿಕೊಳ್ಳುತ್ತಿದ್ದ ಸಮಯದಲ್ಲಿ ಮನೆಯವರು ವಿಚಾರಿಸಲು ವಿಷದ ವಾಸನೆ ಬಂದಿದ್ದು, ತತಕ್ಷಣ ಚಿಕಿತ್ಸೆ ಕೊಡಿಸಲು ಮುಂದಾದರೂ ಪ್ರಯೋಜನವಾಗದ ಅಸುನೀಗಿದ್ದಾರೆ.
ಮೃತನಿಗೆ 1.25 ಎಕರೆ ತರಿ, 2 ಎಕರೆ ಬಾಗಾಯ್ತು ಜಮೀನಿದ್ದು, ಕೃಷಿಗಾಗಿ ಧರ್ಮಸ್ಥಳ ಸಂಘ, ನಗರ ನೀಲಕಂಠೇಶ್ವರ ಸಹಕಾರ ಸಂಘ, ಜಯನಗರ ಉಜ್ಜೀವನ್ ಫೈನಾನ್ಸ್, ರಿಪ್ಪನ್ ಪೇಟೆಯ ಚೈತನ್ಯ ಗ್ರಾಮೀಣ ಬ್ಯಾಂಕ್, ಮೂಕಾಂಬಿಕ ಸ್ವಸಹಾಯ ಸಂಘ ಸೇರಿದಂತೆ, ತನ್ನ ಹಾಗು ಪತ್ನಿ ಹೆಸರಲ್ಲಿ ರೂ 6.5 ಲಕ್ಷ ಹಣ ಸಾಲ ಪಡೆದಿದ್ದಾನೆ. ಕೃಷಿಯಲ್ಲಿ ಹೆಚ್ಚಿನ ಆದಾಯ ಬಾರದ ಕಾರಣ ಸಾಲಬಾಧೆಗೆ ತುತ್ತಾಗಿ ಕೊನೆಗೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನ ಪುತ್ರ ಅಮಿತ್ ನೀಡಿದ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶಿವಾನಂದ ಕೋಳಿ ಪ್ರಕರಣ ದಾಖಲಿಸಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…