ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್
ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ.
ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು ಹರೀಶ್ ಪ್ರಭು ಎಂಬುವವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಬಿಜೆಪಿ ಪಕ್ಷದ ಕಾರ್ಯಕರ್ತನಾಗಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಪಟ್ಟಣದ ಪುರಾಣ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿಗೆ ಹರಕೆ ಮಾಡಿಕೊಂಡಿದ್ದೇ ಆ ಪ್ರಕಾರದಲ್ಲಿ ಹರಕೆ ತೀರಿಸಿದ್ದೇನೆ ಎಂದು ಮಾದ್ಯಮಗಳಲ್ಲಿ ತಿಳಿಸಿದ್ದಾರೆ ಆದರೆ ಹರೀಶ್ ಪ್ರಭು ಎಂಬುವವರು ಸಾಮಾನ್ಯ ಮತದಾರನೇ ಹೊರತು ನಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವ ಕೂಡ ಹೊಂದಿರುವುದಿಲ್ಲ ಎಂದು ತಿಳಿಸಿದ್ದಾರೆ.
ನಾನು ಬಿಜೆಪಿ ಕಟ್ಟಾ ಕಾರ್ಯಕರ್ತ ಹಾಗೂ ನನ್ನ ನರನಾಡಿಗಳಲ್ಲಿ ಬಿಜೆಪಿ ಪಕ್ಷದ ತತ್ವ ಸಿದ್ದಾಂತ ಇದೆ ಎಂದು ಹೇಳುವ ಅವರಿಗೂ ನಮ್ಮ ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ, ಈ ರೀತಿಯಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಅವರು ಈ ಸಂಧರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…