ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ.

ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಕೆಡಿಪಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ನೂತನ ಸದಸ್ಯರುಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ , ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ , ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ , ಜಿಪಂ ಮಾಜಿ ಸದಸ್ಯರಾದ ಕಲಗೋಡು ರತ್ನಾಕರ್ , ಬಿ ಪಿ ರಾಮಚಂದ್ರ , ರಿಪ್ಪನ್‌ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ ಗವಟೂರು ಶುಭಾಶಯ ಕೋರಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

3 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

16 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

18 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

21 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

21 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

21 hours ago