ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ.

ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ ಸೇವೆ ಗೈದಿರುವ ಎರಡು ಜಲಾಶಯಗಳಿಗೆ ಬಾಗಿನ ಸಲ್ಲಿಸುವ ಅವಕಾಶ ಓರ್ವ ಹೆಣ್ಣಾಗಿ ಸಿಕ್ಕಿರುವುದಕ್ಕೆ ಧನ್ಯತೆ ಸಿಕ್ಕಿದೆ. ಇದೊಂದು ಅಪೂರ್ಣ ತಾಣ. ಬಹುತೇಕ ಮಹಿಳೆಯರು ಇದರಲ್ಲಿ ಭಾಗವಹಿಸಿದ್ದು ಬಾಗಿನ ಸಂಭ್ರಮಕ್ಕೆ ನೀಡಿತು ಎಂದರು.

ಈ ಸಂದರ್ಭದಲ್ಲಿ ಕೊಡಚಾದ್ರಿ ಪದವಿ ಕಾಲೇಜು ಸಮಿತಿ ಉಪಾಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮಾತನಾಡಿ ಅವಳಿ ಜಲಾಶಯ ವೀಕ್ಷಣೆಗೆ ಸ್ಥಳೀಯ ಮಟ್ಟದಲ್ಲೇ ಪಾಸ್ ನೀಡಬೇಕು ಮತ್ತು ಪ್ರವಾಸೋಧ್ಯಮ ಅಭಿವೃದ್ಧಿಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಮನವಿ ಮಾಡಿದರು.

ಕೆಪಿಸಿ ಸಹಾಯಕ ಎಂಜನಿಯರ್ (ಗೇಟ್) ವಿನಯಕುಮಾರ ಕೆ, ಅವಳಿ ಡ್ಯಾಂ ವೀಕ್ಷಣೆಗೆ ಸಂಬಂಧಿಸಿ ಸ್ಥಳೀಯವಾಗಿ ಪಾಸ್ ನೀಡುವ ವಿಚಾರವನ್ನು ಶಾಸಕರು ಕೂಡ ಪ್ರಸ್ತಾಪಿಸಿದ್ದಾರೆ. ತಹಶೀಲ್ದಾರ್ ಕೂಡ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಈ ಸಂಧರ್ಭದಲ್ಲಿ ಕರಿಮನೆ ಗ್ರಾಪಂ ಅಧ್ಯಕ್ಷೆ ದೇವಮ್ಮ ಗೋಪಾಲ್, ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ, ಕರವಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ, ಕೆಪಿಸಿ ಅಧಿಕಾರಿಗಳಾದ ಓಂಕಾರಪ್ಪ, ಹೊಂಬೇಗೌಡ್ರು, ಬಿಇಒ ಕೃಷ್ಣಮೂರ್ತಿ,‌ ರತ್ನಾಕರಗೌಡ, ಪೀಕಾರ್ಡ್ ಬ್ಯಾಂಕ್ ನಿರ್ದೇಶಕ ಸತೀಶ್ ಪಟೇಲ್, ಶಾಸಕ ಬೇಳೂರು ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ದೇವೇಂದ್ರ ನಾಯ್ಕ, ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ವಿಶೇಷವಾಗಿ ಮಹಿಳಾ ಸಿಬ್ಬಂದಿಗಳು, ಗ್ರಾಪಂ ಸದಸ್ಯರು, ಸಿಬ್ಬಂದಿಗಳು ಭಾಗವಹಿಸಿದ್ದರು.

ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ.ಕೆಲವು ದಿನಗಳ ಹಿಂದೆ ತಾಲೂಕಿನ ಹಿರಿಯ ಪತ್ರಕರ್ತ ರವಿ ಬಿದನೂರು ರವರು ಅವಳಿ ಜಲಾಶಯಗಳಿಗೆ ಬಾಗಿನ ಭಾಗ್ಯವಿಲ್ಲ ಎಂಬ ಲೇಖನ ಪ್ರಕಟಿಸಿದ್ದರು.

ಹಿರಿಯ ಪತ್ರಕರ್ತರ ವರದಿಯಿಂದ ಎಚ್ಚೆತ್ತ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ , ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಅನೇಕ ಮುಖಂಡರು ಬಾಗಿನ ಅರ್ಪಿಸಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

15 hours ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

22 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

2 days ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

2 days ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

2 days ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

2 days ago