POSTMANNEWS

ನೈಜ ಸುದ್ದಿ ನೇರ ಬಿತ್ತರ..

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

GridArt 20240822 200837879.jpg

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ  ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ.

ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ  ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ ಕಾಲ ಹರಣ ಮಾಡಿರುವ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿ ಮುಂದಿನ 6 ತಿಂಗಳ ವರೆಗೆ ವಿಶೇಷಾಧಿಕಾರಿಗಳನ್ನ ನೇಮಿಸಿ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.