ಜೋಗ- ಕಾರ್ಗಲ್ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ |
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಎಂ. ರಾಜು ಹಾಗೂ ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ಆಯ್ಕೆಯಾಗಿದ್ದಾರೆ.
ಇಂದು ನಡೆದ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಪತ್ಯ ಮೆರೆದಿದೆ.ಚುನಾವಣೆಯಲ್ಲಿ ಖುದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಅಖಾಡಕ್ಕಿಳಿದು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.
ಇದೇ ಸಂಧರ್ಭದಲ್ಲಿ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.
ಜೋಗ ಕಾರ್ಗಲ್ ನಲ್ಲಿ ಈ ಹಿಂದೆಯೂ ಕಾಂಗ್ರೆಸ್ ಅಧಿಕಾರ ಹಿಡಿದಿತ್ತು. ಮತ್ತೆ ಅಧಿಕಾರ ಹಿಡಿದಿದ್ದಾರೆ. ಇಂದು ತೀರ್ಥಹಳ್ಳಿ ಮತ್ತು ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ಚುನಾವಣೆ ನಡೆದಿದ್ದು ಎರಡೂ ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಹಿಡಿದಿದೆ.
ತೀರ್ಥಹಳ್ಳಿಯಲ್ಲಿ ಜೋಡೆತ್ತುಗಳಾದ ಆರ್ ಎಂ ಎಂ ಮತ್ತು ಕಿಮ್ಮನೆ ಅಖಾಡಕ್ಕಿಳಿದಿದ್ದರೆ, ಜೋಗ – ಕಾರ್ಗಲ್ ನಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅಖಾಡಕ್ಕಿಳಿದು ಗೆಲುವಿನ ನಗೆ ಬೀರಿದ್ದಾರೆ.