ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ.
ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ. ಅಪರಾಧಿಗಳು 2021ರಲ್ಲಿ, ಗಾಂಜಾ ಮಾರಾಟದ ಕುರಿತು ಪೊಲೀಸರಿಗೆ ಮಾಹಿತಿ ಕೊಡುತ್ತಾನೆಂಬ ಕಾರಣಕ್ಕೆ ಇರ್ಫಾನ್ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ.
ನಗರದ ಟಿಪ್ಪು ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಈ ಆರೋಪಿಗಳಿಗೆ ಜಾಮೀನು ನೀಡಬಾರದು. ಜಾಮೀನು ನೀಡಿದರೆ ಮೃತ ಇರ್ಫಾನ್ ಕುಟುಂಬಕ್ಕೆ ತೊಂದರೆ ನೀಡುತ್ತಾರೆ ಎಂದು ಪೊಲೀಸರು ಹಾಗೂ ಸರ್ಕಾರಿ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ವಾದ-ವಿವಾದ ಆಲಿಸಿದ ನ್ಯಾಯಾಲಯ 8 ಜನ ಆರೋಪಿಗಳಇಗೆ ತಲಾ 5 ಸಾವಿರ ರೂ. ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.