ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ವಾಟರ್ ಪ್ಯೂರಿಫೈಯರ್ ವಿತರಣೆ ಕಾರ್ಯಕ್ರಮ ನಡೆಯಿತು.
ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಶಾಸಕರ ಆಪ್ತ ಸಹಾಯಕರಾದ ಮಂಜು ಸಣ್ಣಕ್ಕಿ ಇವರಿಂದ ದಾನಿಗಳ ನೆರವಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಹಾಗೂ ಮಳೆಯಿಂದ ಹಾನಿಯದ ಶಾಲೆಯ ಕಾಂಪೌಂಡ್ ದುರಸ್ತಿಗೆ ಚಾಲನೆ ನೀಡಲಾಯಿತು
ಇದೇ ಸಂಧರ್ಭದಲ್ಲಿ ಸ್ಥಳೀಯ ಮೋಹಿಯದ್ದೀನ್ ಜುಮ್ಮಾಮಸೀದಿ ಸಮಿತಿಯ ವತಿಯಿಂದ ಶಾಲೆಗೆ ಕುಡಿಯುವ ನೀರಿನ ವಾಟರ್ ಪ್ಯೂರಿಫೈಯರ್ ಕೊಡುಗೆಯಾಗಿ ನೀಡಲಾಯಿತು..
ಈ ಸಮಾರಂಭದಲ್ಲಿ ಎಸ್ ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಸತ್ತರ್ , ಗ್ರಾಮ ಪಂಚಾಯತ್ ಸದಸ್ಯರಾದ ನಾಗೋಡಿ ವಿಶ್ವನಾಥ್ , ಶೋಭಾ ಉದಯ್ ಕುಮಾರ್ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಸುಬ್ರಮಣ್ಯ. ಮುಂತಾದವರು ಉಪಸ್ಥಿತರಿದ್ದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್