Headlines

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

NITTURU | ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ 

ಹೊಸನಗರ ತಾಲೂಕಿನ ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ , ವಾಟರ್ ಪ್ಯೂರಿಫೈಯರ್ ವಿತರಣೆ ಕಾರ್ಯಕ್ರಮ ನಡೆಯಿತು.


ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಯುವ ಮುಖಂಡರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಹಾಗೂ ಶಾಸಕರ ಆಪ್ತ ಸಹಾಯಕರಾದ ಮಂಜು ಸಣ್ಣಕ್ಕಿ ಇವರಿಂದ ದಾನಿಗಳ ನೆರವಿನಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಹಾಗೂ ಮಳೆಯಿಂದ ಹಾನಿಯದ ಶಾಲೆಯ ಕಾಂಪೌಂಡ್ ದುರಸ್ತಿಗೆ ಚಾಲನೆ ನೀಡಲಾಯಿತು 

ಇದೇ ಸಂಧರ್ಭದಲ್ಲಿ ಸ್ಥಳೀಯ ಮೋಹಿಯದ್ದೀನ್ ಜುಮ್ಮಾಮಸೀದಿ ಸಮಿತಿಯ ವತಿಯಿಂದ ಶಾಲೆಗೆ ಕುಡಿಯುವ ನೀರಿನ ವಾಟರ್ ಪ್ಯೂರಿಫೈಯರ್ ಕೊಡುಗೆಯಾಗಿ ನೀಡಲಾಯಿತು..

ಈ ಸಮಾರಂಭದಲ್ಲಿ ಎಸ್ ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಸತ್ತರ್ , ಗ್ರಾಮ ಪಂಚಾಯತ್ ಸದಸ್ಯರಾದ ನಾಗೋಡಿ ವಿಶ್ವನಾಥ್ , ಶೋಭಾ ಉದಯ್ ಕುಮಾರ್ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ  ಸುಬ್ರಮಣ್ಯ.  ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *