ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ರಿಪ್ಪನ್ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬಾಳೂರು, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply