Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ.

ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿ‌ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುವ ಮೂಲಕ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಪ್ರಚಂಡ ಗೆಲುವಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಕ್ರೀಯವಾಗಿ ಪಾಲ್ಗೊಂಡಿದ್ದೆ ಆದರೆ ಈಗ ಕೆಲವು ಪಟ್ಟಭದ್ರ ಹಿತಾಸಕ್ತಿಯವರ ತೋಜೋವಧೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು.

ನಾನು ನಮ್ಮ ಅಜ್ಜ ಮತ್ತು ತಂದೆಯವರ ಕಾಲದಿಂದಲೂ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದವರು. ಅವರ ದಾರಿಯಲ್ಲಿ ನಾನು ಪಕ್ಷ ನಿಷ್ಟೆಯೊಂದಿಗೆ ಹಿರಿಯರಾದ ಕಾಗೋಡು ತಿಮ್ಮಪ್ಪರವರ ಮತ್ತು ನಂತರದಲ್ಲಿ ಬೇಳೂರು ಗೋಪಾಲಕೃಷ್ಣರವರೊಂದಿಗೆ ಪಕ್ಷಕ್ಕಾಗಿ ದುಡಿದಿದ್ದೇನೆ, ಕಳೆದ ವರ್ಷ ನಡೆದ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದೇ ಆದರೆ ಅವರು ಹಾಗೂ ರಿಪ್ಪನ್‌ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷರು ಮತ್ತು ಇನ್ನಿತರರು ಪಕ್ಷದಲ್ಲಿ ನನ್ನ ಏಳಿಗೆಯನ್ನು ಸಹಿಸದೇ ನನ್ನ ವಿರುದ್ದ ಇಲ್ಲಸಲ್ಲದ ಮಾತುಗಳನ್ನಾಡಿ ನನ್ನ ಮನಸಿಗೆ ನೋವುಂಟು ಮಾಡುವುದರೊಂದಿಗೆ ಕ್ಷೇತ್ರದ ಶಾಸಕರಲ್ಲಿ ಸಹ ನನ್ನ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಕಡೆಗಣಿಸುಂತೆ ಮಾಡಿದ್ದಾರೆ.

ಈ ಬಗ್ಗೆ ನಾನು ಈ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಸಹ ಚರ್ಚಿಸಲು ಸಾಕಷ್ಟು ಪ್ರಯತ್ನಪಟ್ಟರು ಕೂಡಾ ನಮಗೆ ಆವಕಾಶ ನೀಡದ ಹಾಗೇ ಪಟ್ಟಣದ ಕೆಲವು ಕಾಂಗ್ರೆಸ್ ಮುಖಂಡರು ಪಿತೂರಿ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಬೇಸರಗೊಂಡು ನಾನು ನನ್ನ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ನೂರಾರು ಮಹಿಳಾ ಕಾರ್ಯಕರ್ತರು ಸ್ಥಳಿಯ ನಾಯಕರುಗಳ ನಡೆಗೆ ಬೇಸತ್ತು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಸಾಗರದ ಮಧುಮತಿ ಹಾಗೂ ಸೊರಬದ ರಾಜೇಶ್ವರಿ ಹಾಜರಿದ್ದರು.

Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

4 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

16 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

17 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

17 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

19 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

22 hours ago