w
Headlines
Home » RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು

GridArt 20240410 220901104.jpg

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು

ರಿಪ್ಪನ್‌ಪೇಟೆ: ಅಪ್ರಾಪ್ತಯ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪೋಕ್ಸ್‌ ಪ್ರಕರಣ ದಾಖಲಾಗಿದೆ.

ಹರತಾಳು ಗ್ರಾಮದ ಉಮೇಶ ಆರೋಪಿಯಾಗಿದ್ದು, ಹುಂಚ ಸಮೀಪದ ಗ್ರಾಮವೊಂದರ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಕಳೆದ ಕೆಲದಿನಗಳಿಂದ ಹರತಾಳಿನ ಉಮೇಶನ ಮನೆಯಲ್ಲಿಯೇ ವಾಸವಿದ್ದಳು ಎನ್ನಲಾಗಿದೆ.

ಅಪ್ರಾಪ್ತಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಪ್ರಾಪ್ತೆಯು ಹೆಣ್ಣು ಮಗುವಿಗೆ ಜನ್ಮನೀಡಿದ್ದಾಳೆ. ಹೆರಿಗೆಗೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಒದಗಿಸುವ ಸಮಯದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಆಸ್ಪತ್ರೆಯ ಸಿಬ್ಬಂದಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳೆದ ಒಂದು ವರ್ಷದ ಹಿಂದೆ ಇದೇ ಅಪ್ರಾಪ್ತಯ ಮೇಲೆ ಇನ್ನೊಬ್ಬ ಯುವಕನಿಂದ ಲೈಂಗಿಕ ದೌರ್ಜನ್ಯ ನಡೆದು ಪ್ರಕರಣ ದಾಖಲಾಗಿತ್ತು. ಇದು ಅಪ್ರಾಪ್ತೆಯ ಮೇಲೆ ಘಟಿಸಿರುವ ಎರಡನೇ ಪ್ರಕರಣವಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.