Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ |

ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆಯ 09 ನೇ ತರಗತಿಯ ವಿದ್ಯಾರ್ಥಿನಿ ಶ್ರೇಯಾ ವಯನಾಡು ಜಲ ದುರಂತದ ಸಂತ್ರಸ್ಥರಿಗೆ ತನಗೆ ದೊರೆತ ಕ್ರೀಡಾ ವೇತನ 10 ಸಾವಿರ ರೂ ಹಣವನ್ನು ತಹಶೀಲ್ದಾರ್ ರಶ್ಮಿ ಹಾಲೇಶ್ ಮುಖಾಂತರ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾಳೆ..


ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ 9 ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಶ್ರೇಯಾ 14 ವರ್ಷ ವಯೋಮಿತಿಯೊಳಗಿನ ರಾಷ್ಟ್ರೀಯ ಕಬ್ಬಡಿಯಲ್ಲಿ ರಾಜ್ಯ ತಂಡದಿಂದ ರಾಷ್ಟ್ರ ಮಟ್ಟದ ಕಬ್ಬಡಿ ತಂಡಕ್ಕೆ ಆಯ್ಕೆಯಾಗಿ ಅದ್ಭುತ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ನೀಡಿದ ಹತ್ತು ಸಾವಿರ ರೂಪಾಯಿಗಳ ಕ್ರೀಡಾ  ವೇತನವನ್ನು ಪಡೆದಿದ್ದಳು.

ಕೇರಳದ ವಯನಾಡುವಿನಲ್ಲಿ ಸಂಭವಿಸಿದ ಜಲದುರಂತವನ್ನು ಮಾದ್ಯಮಗಳಲ್ಲಿ ನೋಡಿ ಮನಕರಗಿ ತನಗೆ ದೊರೆತ ಕ್ರೀಡಾ ವೇತನವನ್ನು ದುರಂತದ ಸಂತ್ರಸ್ಥರಿಗೆ ನೀಡಲು ನಿರ್ಧರಿಸಿ ತನ್ನ ಪೋಷಕರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೋಷಕರಾದ ರಾಘವೇಂದ್ರ ಹಾಗೂ ಸವಿತಾ ದಂಪತಿಗಳು ಮಾಹಿತಿಯನ್ನು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ನಮ್ಮ ಪೋಸ್ಟ್ ಮ್ಯಾನ್ ನ್ಯೂಸ್ ಗಮನಕ್ಕೆ ತಂದ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಗೆ ಮಾಹಿತಿ ತಿಳಿಸಿದಾಗ ಅವರು ಈ ವಿದ್ಯಾರ್ಥಿನಿಯ ಮಾನವೀಯತೆಯ ಗುಣವನ್ನು ಮೆಚ್ಚಿ ಸ್ವತಃ ತಾವೇ ಖುದ್ದಾಗಿ ರಿಪ್ಪನ್‌ಪೇಟೆ ನಾಡಕಛೇರಿಗೆ ಆಗಮಿಸಿ ದೇಣಿಗೆಯನ್ನು ಸರ್ಕಾರದ ಪರವಾಗಿ ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.


ಇಂದು ಸಂಜೆ ರಿಪ್ಪನ್‌ಪೇಟೆಯ ನಾಡ ಕಛೇರಿಯಲ್ಲಿ ಶ್ರೇಯಾ ಹಾಗೂ ಕುಟುಂಬಸ್ಥರಿಂದ ವಯನಾಡು ಸಂತ್ರಸ್ಥರ ಪರಿಹಾರ ನಿಧಿಗೆ ದೇಣಿಗೆಯನ್ನು ತಹಶೀಲ್ದಾರ್ ರಶ್ಮಿ ಹಾಲೇಶ್ ಸ್ವೀಕರಿಸಿ ನಂತರ ಮಾತನಾಡಿ ವಯನಾಡು ದುರಂತ ಸಂತ್ರಸ್ಥರಿಗೆ ತನ್ನ ಕ್ರೀಡಾ ವೇತನ 10 ಸಾವಿರ ರೂ ವನ್ನು ದೇಣಿಗೆಯಾಗಿ ನೀಡುವ ಮೂಲಕ ವಿದ್ಯಾರ್ಥಿನಿ ಶ್ರೇಯಾ ಎಲ್ಲರಿಗೂ ಮಾದರಿಯಾಗಿದ್ದಾಳೆ ಎಂದು ಅಭಿನಂದನೆಯನ್ನು ಸಲ್ಲಿಸಿದರು.

ಶ್ರೇಯಾ ತನ್ನ ವಿದ್ಯಾರ್ಥಿ ವೇತನವನ್ನು ಸಂತಸ್ಥರಿಗೆ ದೇಣಿಗೆ ನೀಡಿರುವುದರಿಂದ ಪ್ರೇರಣೆಗೊಂಡ ವಿದ್ಯಾರ್ಥಿನಿಯ ಸಹೋದರ ಶ್ರವಂತ್ ಕೂಡ ತನ್ನ ಪೋಷಕರು ನೀಡಿದ ಹಣದಲ್ಲಿ ಉಳಿತಾಯ ಮಾಡಿದ ಐದು ಸಾವಿರ ರೂಪಾಯಿ ಯನ್ನು ಇದೇ ಸಂಧರ್ಭದಲ್ಲಿ ವಯನಾಡು ಸಂತ್ರಸ್ಥ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾನೆ.


ಈ ಸಂದರ್ಭದಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ, ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ವಿದ್ಯಾರ್ಥಿನಿಯ ತರಬೇತುದಾರ ವಿನಯ್ ಕುಮಾರ್ , ಕಂದಾಯ ಇಲಾಖೆಯ ಸೈಯದ್ ಅಪ್ರೋಜ್, ಮಂಜುನಾಥ, ರಾಘವೇಂದ್ರ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

6 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

6 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago