Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ

ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿ ಶಿಥಿಲವಾಗಿರುವ ಹಿನ್ನಲೆಯಲ್ಲಿ ಹಳೆ ಸಂತೇ ಮಾರ್ಕೆಟ್ ನಲ್ಲಿರುವ ಅಂಬೇಡ್ಕರ್ ಸಭಾ ಭವನಕ್ಕೆ ಸ್ಥಳಾಂತರಿಸಲಾಗಿದ್ದು ಈ ಸ್ಥಳ ಅವೈಜ್ಞಾನಿಕವಾಗಿದ್ದು ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಶಿವಮೊಗ್ಗ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ನಾಡಕಛೇರಿ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಅಗಸ್ಟ್ ತಿಂಗಳಿನಿಂದ ಹಳೇ ಸಂತೇ ಮಾರ್ಕೆಟ್ ಬಳಿಯಿರುವ ಅಂಬೇಡ್ಕರ್ ಸಭಾ ಭವನಕ್ಕೆ ಕಛೇರಿಯನ್ನು ವರ್ಗಾಯಿಸಲಾಗಿದ್ದು ಈ ಸ್ಥಳ ಅವೈಜ್ಞಾನಿಕವಾಗಿದ್ದು ಜನಸಾಮಾನ್ಯರಿಗೆ ತೊಂದರೆ ಉಂಟಾಗುತ್ತಿದೆ.ಇದರಿಂದ ಸಾರ್ವಜನಿಕರು ಪರದಾಡುತಿದ್ದಾರೆ ಕೂಡಲೇ ಸಂಬಧಿಸಿದವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ..

ನಾಡಕಛೇರಿ ಕಟ್ಟಡ ತುಂಬಾ ಶಿಥಿಲಗೊಂಡಿರುವುದರಿಂದ ಅದನ್ನು ದುರಸ್ತಿ ಪಡಿಸುವವರೆಗೂ ರಿಪ್ಪನ್‌ಪೇಟೆಯ ಮುಖ್ಯ ರಸ್ತೆಯಲ್ಲಿ ಯಾವುದಾದರು ಕಟ್ಟಡದಲ್ಲಿ ಕಛೇರಿಯನ್ನು ಸ್ಥಳಾಂತರ ಮಾಡುವ ಮೂಲಕ ಜನಸಾಮನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಸಮಸ್ಯೆಗಳ ಕೂಪವಾಗಿರುವ ಹೊಸ ಕಛೇರಿ :

ಹಳೇ ಸಂತೇ ಮಾರ್ಕೆಟ್ ನಲ್ಲಿರುವ ಅಂಬೇಡ್ಕರ್ ಸಭಾ ಭವನದಲ್ಲಿ ಸ್ಥಳಾಂತರಗೊಂಡಿದ್ದು ಈ ಕ‌ಛೇರಿಯಲ್ಲಿ ಶೌಚಾಲಯದ ವ್ಯವಸ್ಥೆ ಇಲ್ಲದೇ ಸಾರ್ವಜನಿಕರು ಹಾಗೂ ನೌಕರರು ಪರದಾಡುವಂತಾಗಿದೆ.
ಈ ಕಟ್ಟಡದ ಸುತ್ತಮುತ್ತಲಿನಲ್ಲಿ ಕೊಳಚೆ ನೀರು ನಿಂತು ಡೆಂಗ್ಯೂ ರೋಗಕ್ಕೆ ಆಹ್ವಾನ ನೀಡುವಂತಾಗಿದ್ದು ಸ್ವಚ್ಚತೆ ಎನ್ನುವುದು ಮರೀಚಿಕೆಯಾಗಿದೆ.


ಸದರಿ ಕಟ್ಟಡದ ಸಮೀಪದಲ್ಲೇ ವಿದ್ಯಾರ್ಥಿನಿಯರ ವಸತಿ ನಿಲಯವಿದ್ದು ವಿದ್ಯಾರ್ಥಿನಿಯರ ಭದ್ರತೆಗೂ ಲೋಪ ಉಂಟಾಗುವ ಸಾಧ್ಯತೆಯೇ ಹೆಚ್ಚಿದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತಿದ್ದಾರೆ.

ಒಟ್ಟಾರೆಯಾಗಿ ನಾಡ ಕಛೇರಿ ಸ್ಥಳಾಂತರ ಜನಸಾಮಾನ್ಯರಿಗೆ ಅನಾನುಕೂಲವಾಗುತಿದ್ದು ಪ್ರತಿನಿತ್ಯ ಸಂಬಂಧಿಸದವರಿಗೆ ಹಿಡಿಶಾಪ ಹಾಕುತಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago