w
Headlines
Home » ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

GridArt 20240812 180029122.jpg

ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು.

ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ ವ್ಯಾಪ್ತಿಯಲ್ಲಿ ಈತ ಸೆರೆ ಸಿಕ್ಕಿದ್ದು ಆದರೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರ ಮೇಲೆ ಹಲ್ಲಿಗೆ ಯತ್ನಿಸಿದ್ದು ವಿನೋಬನಗರ ಪಿಎಸ್ಐ ಸುನಿಲ್ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದು ಪಿಎಸ್ಐ ಸುನಿಲ್ ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿ ಭವಿತ್ ಮೇಲೆ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.