Headlines

Sagara: ಚಲಿಸುತಿದ್ದ KSRTC ಬಸ್ ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ಸಾಗರ: ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದಕ್ಕೆ ಬೆಂಕಿ ತಗುಲಿ ಬಸ್‌ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗ ರಸ್ತೆಯಲ್ಲಿ ನಡೆದಿದೆ.

ಏಕಾಏಕಿ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಹುತೇಕ ಸುಟ್ಟು ಹೋಗಿದೆ.ಬಸ್‌ನಲ್ಲಿ  12 ಮಂದಿ ಪ್ರಯಾಣಿಸುತ್ತಿದ್ದು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಘಟನೆಯ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಸ್‌ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. 

ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ ಸಾಗರ ತಾಲ್ಲೂಕಿನ ಜೋಗ ರಸ್ತೆ ಬಳಿ ಸಿಗುವ ಕೆಎಸ್‌ಆರ್‌ಟಿಸಿ ಡಿಪೋ ಬಳಿ ಬರುತ್ತಿತ್ತು. ಈ ವೇಳೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ

Exit mobile version