ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರು ರಿಟರ್ನಿಂಗ್ ಆಫೀಸರ್ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು.
ಶಿವಮೊಗ್ಗ ವಿಭಾಗ :
ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ತಾಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಬಿ.ದಿನೇಶ್ ಬಹುಮತ ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.
ಸಾಗರ ವಿಭಾಗ :
ಸಾಗರ ವಿಭಾಗದಿಂದ ವಿದ್ಯಾಧರ್ ಅವಿರೋಧ ಆಯ್ಕೆಯಾಗಿದ್ದು, ಟಿ.ಶಿವಶಂಕರಪ್ಪ, ಟಿ.ಎಸ್.ದಯಾನಂದ ಗೌಡ್ರು ಜಯಭೇರಿ ಭಾರಿಸಿದ್ದಾರೆ.
ದಾವಣಗೆರೆ ವಿಭಾಗ :
ದಾವಣಗೆರೆ ವಿಭಾಗದಿಂದ ಶಿಮುಲ್ ಮಾಜಿ ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ, ಜಗದೀಶಪ್ಪ ಬಣಕಾರ್, ಚೇತನ್ ಎಸ್.ನಾಡಿಗೇರ್, ಬಿ.ಜಿ.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ವಿಭಾಗ :
ಚಿತ್ರದುರ್ಗ ವಿಭಾಗದಿಂದ ಜಿ.ಪಿ.ರೇವಣಸಿದ್ದಪ್ಪ, ಶೇಖರಪ್ಪ.ಜಿ.ಬಿ, ಸಂಜೀವಮೂರ್ತಿ, ಬಿ.ಆರ್.ರವಿಕುಮಾರ್ ಆಯ್ಕೆಯಾಗಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…